ADVERTISEMENT

2019 ಹಿನ್ನೋಟ | ರಾಷ್ಟ್ರ ರಾಜಕಾರಣ: 2ನೇ ಅವಧಿಗೆ ಮೋದಿ ವಿಜಯ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 8:00 IST
Last Updated 26 ಡಿಸೆಂಬರ್ 2019, 8:00 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ರಾಷ್ಟ್ರ ರಾಜಕಾರಣದಲ್ಲಿ ಗಮನಾರ್ಹ ಬೆಳವಣಿಗೆಗಳಿಗೆ ಕಾರಣವಾದ ವರ್ಷ2019. ಈ ವರ್ಷ ಸಂಭವಿಸಿದ ಪ್ರಮುಖ ವಿದ್ಯಮಾನಗಳ ಇಣುಕು ನೋಟ ಇಲ್ಲಿದೆ.

ಮೇ 24: ಲೋಕಸಭಾ ಚುನಾವಣೆ

303 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

ADVERTISEMENT

ಜೂನ್‌ 28: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ವಿಸ್ತರಣೆ

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆರು ತಿಂಗಳ ಕಾಲ ವಿಸ್ತರಿಸುವ ಪ್ರಸ್ತಾವವನ್ನು ಗೃಹಸಚಿವ ಅಮಿತ್‌ ಶಾ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು.

ಜುಲೈ 5: ಕೇಂದ್ರ ಬಜೆಟ್‌

ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌: ಪೆಟ್ರೋಲ್‌, ಡೀಸೆಲ್‌ ಸುಂಕ ಹೇರಿಕೆ.

ಜುಲೈ 10: ದಿಢೀರ್‌ ರಾಜಕೀಯ ಬೆಳವಣಿಗೆ

ಗೋವಾದಲ್ಲಿ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ 15 ಶಾಸಕರಲ್ಲಿ 10 ಮಂದಿ ಬಿಜೆಪಿ ಸೇರಿದರು. ವಿರೋಧ ಪಕ್ಷದ ನಾಯಕ ಚಂದ್ರಕಾಂತ್‌ ಕವಲೇಕರ್‌ ನೇತೃತ್ವದಲ್ಲೇ ಈ ಶಾಸಕರು ಕಾಂಗ್ರೆಸ್‌ ತೊರೆದಿದ್ದಾರೆ. ಶಾಸಕಾಂಗ ಪಕ್ಷದ ಮೂರನೇ ಎರಡರಷ್ಟು ಸದಸ್ಯರ ಸೇರ್ಪಡೆಯಿಂದಾಗಿ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯಿಸುವುದಿಲ್ಲ.

ಜುಲೈ 25: ಆರ್‌ಟಿಐ: ಮಾಹಿತಿ ಹಕ್ಕು (ತಿದ್ದುಪಡಿ) ಮಸೂದೆ– 2019ಕ್ಕೆ ರಾಜ್ಯಸಭೆ ಒಪ್ಪಿಗೆ

ಕಾಂಗ್ರೆಸ್‌ ನೇತೃತ್ವದಲ್ಲಿ ವಿರೋಧ ಪಕ್ಷಗಳ ಎಲ್ಲ ಸದಸ್ಯರ ಸಭಾತ್ಯಾಗದ ಬಳಿಕ ವಿವಾದಾತ್ಮಕ ತಿದ್ದುಪಡಿ ಮಸೂದೆಗೆ ಅಂಗೀಕಾರ ಕೊಡಲಾಯಿತು.

ಆಗಸ್ಟ್‌ 5: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು

ಜಮ್ಮು–ಕಾಶ್ಮೀರಕ್ಕೆ ವಿಶೇಷ ಸೌಲಭ್ಯ ಕಲ್ಪಿಸಿದ್ದ 370ನೇ ವಿಧಿ ರದ್ದು. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ಅಧಿಸೂಚನೆ. ಈ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್‌ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮಸೂದೆ ಲೋಕಸಭೆಯಲ್ಲಿ ಮಂಡನೆ.

ಆಗಸ್ಟ್‌ 21: ಚಿದಂಬರಂ ಬಂಧನ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಚಿದಂಬರಂ ಸೆರೆ

ಆಗಸ್ಟ್‌ 25: ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ

ಬಿಜೆಪಿ ನೀರಸ ಪ್ರದರ್ಶನ. ಬಿಜೆಪಿ–ಶಿವಸೇನಾ ಮೈತ್ರಿಕೂಟಕ್ಕೆ ಸರಳ ಬಹುಮತ. ಹರಿಯಾಣದಲ್ಲಿ ಅತಂತ್ರ ಸ್ಥಿತಿ.

ನವೆಂಬರ್‌12: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ

ನವೆಂಬರ್‌ 23: ದಿಢೀರ್‌ ಬೆಳವಣಿಗೆ

ಬಿಜೆಪಿಯ ದೇವೇಂದ್ರ ಫಡಣವೀಸ್‌ ಮುಖ್ಯಮಂತ್ರಿಯಾಗಿ ಮತ್ತು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕ ಅಜಿತ್‌ ಪವಾರ್‌ ಅವರು ಉಪಮುಖ್ಯಮಂತ್ರಿಯಾಗಿ ತರಾತುರಿಯಲ್ಲಿ ಪ್ರಮಾಣವಚನ ಸ್ವೀಕಾರ

ನವೆಂಬರ್‌ 26: ಮಹಾರಾಷ್ಟ್ರ ವಿಧಾನಸಭೆ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗೆ ದೇವೇಂದ್ರ ಫಡಣವೀಸ್‌, ಅಜಿತ್‌ ರಾಜೀನಾಮೆ. ಶಿವಸೇನಾ–ಎನ್‌ಸಿಪಿ–ಕಾಂಗ್ರೆಸ್‌ ಜತೆಗೂಡಿ ಮಾಡಿಕೊಂಡ ಮೈತ್ರಿಕೂಟ ‘ಮಹಾ ವಿಕಾಸ ಅಘಾಡಿ’ ಸರ್ಕಾರ ರಚನೆಗೆ ವೇದಿಕೆ ಸಿದ್ಧತೆ

ನವೆಂಬರ್‌ 28: ಹೊಸ ಸರ್ಕಾರ ಅಸ್ತಿತ್ವಕ್ಕೆ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಪ್ರಮಾಣವಚನ ಸ್ವೀಕಾರ

ಡಿಸೆಂಬರ್ 23: ಜಾರ್ಖಂಡ್ ವಿಧಾನಸಭೆ ಚುನಾವಣೆ

ಜಾರ್ಖಂಡ್ ಆಡಳಿತವು ಬಿಜೆಪಿಯ ಕೈಜಾರಿ ಜೆಎಂಎಂ–ಕಾಂಗ್ರೆಸ್‌–ಆರ್‌ಜೆಡಿ ಮೈತ್ರಿಕೂಟದ ಪಾಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.