ಲಖನೌ: ಅಯೋಧ್ಯೆಯ ರಾಮ ಮಂದಿರವು ದೇಶದ ಪಾಲಿಗೆ ‘ರಾಷ್ಟ್ರ ಮಂದಿರ’ವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದಲ್ಲಿ 'ಗರ್ಭಗುಡಿ' ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಮ ಮಂದಿರವು ಜಗತ್ತಿನಲ್ಲಿ ಸನಾತನ ಧರ್ಮವನ್ನು ಅನುಸರಿಸುವವರ ನಂಬಿಕೆಯ ತಾಣವಾಗಲಿದೆ. ರಾಮ ಮಂದಿರ ಚಳವಳಿಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಇಂದು ತುಂಬಾ ಸಂತಸ ಹೊಂದಿರುತ್ತಾರೆ ಎಂದು ಅವರು ಹೇಳಿದರು.
‘ಇದು ಭಾರತದ ಜನರ ನಂಬಿಕೆಯ ಮೇಲೆ ದಾಳಿ ಮಾಡಿದ ಎಲ್ಲಾ ವಿದೇಶಿ ಅತಿಕ್ರಮಣಕಾರರ ವಿರುದ್ಧದ ಗೆಲುವಾಗಿದೆ’ ಎಂದು ಯೋಗಿ ಬಣ್ಣಿಸಿದರು.
ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಸಂತರು ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
‘ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರಕಾರ ಮಂದಿರದ ನಿರ್ಮಾಣವು 2024ಕ್ಕೆ ಪೂರ್ಣಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.