ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗಿರುವ ಪ್ರಾಣಿಗಳ ಮೇಲಿನ ಪ್ರೀತಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿನ ನೆಚ್ಚಿನ ವ್ಯಕ್ತಿಯನ್ನಾಗಿ ಪರಿವರ್ತಿಸಿದೆ.
ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ಅವರು ತಮ್ಮ ತೊಡೆಯ ಮೇಲೆ ಬೆಕ್ಕನ್ನು ಕೂರಿಸಿಕೊಂಡಿರುವ ಚಿತ್ರವು ಈಗ ಸಾಮಾಜಿಕ ಮಾಧ್ಯಮದಲ್ಲಿ ಬಹು ಜನಪ್ರಿಯವಾಗಿದೆ.
‘ಪಕ್ಷಿಗಳು ಮತ್ತು ಪ್ರಾಣಿಗಳು ಸಹ ಸ್ನೇಹಿತರು ಮತ್ತು ಶತ್ರುಗಳ ನಡುವಿನ ವ್ಯತ್ಯಾಸವನ್ನು ಕಂಡುಕೊಳ್ಳಬಲ್ಲವು’ ಎಂಬ ಶೀರ್ಷಿಕೆಯೊಂದಿಗೆ ಮುಖ್ಯಮಂತ್ರಿಗಳು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಗೋರಖ್‌ಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆದಿತ್ಯನಾಥ್ ತಮ್ಮ ಸಾಕುಪ್ರಾಣಿಗಳೊಂದಿಗೆ ಮಾತನಾಡುತ್ತಾರೆ. ದೇವಸ್ಥಾನದ ಗೋಶಾಲೆಯಲ್ಲಿ ದನಗಳೊಂದಿಗೆ ಸಮಯ ಕಳೆಯುತ್ತಾರೆ. ಪ್ರಾಣಿಗಳಿಗೆ ತಮ್ಮ ಕೈಗಳಿಂದ ಬೆಲ್ಲ, ಮೇವು ತಿನ್ನಿಸುತ್ತಾರೆ. ಯೋಗಿಯವರ ಈ ಕೆಲಸಗಳಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಮೆಚ್ಚುಗೆ ವ್ಯಕ್ತವಾಗುತ್ತವೆ.
ತಮ್ಮ ಸಾಕುನಾಯಿಗಳಾದ ಕಾಳು ಮತ್ತು ಗುಲ್ಲು ಜೊತೆ ಆಟ ಆಡುವ ಚಿತ್ರಗಳನ್ನೂ ಹಂಚಿಕೊಂಡಿದ್ದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಗೋರಖ್‌ಪುರ ಮೃಗಾಲಯದಲ್ಲಿ ಚಿರತೆ ಮರಿಗಳಿಗೆ ಆಹಾರ ನೀಡಿ ಮುದ್ದಿಸುತ್ತಿರುವ ಚಿತ್ರವೂ ಟ್ವಿಟರ್‌ನಲ್ಲಿ ಸದ್ದು ಮಾಡಿತ್ತು.
ಅಭಿವೃದ್ಧಿ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯವನ್ನು ಮಾದರಿಯಾಗಿ ಸ್ಥಾಪಿಸಿರುವ ಯೋಗಿ ಆದಿತ್ಯನಾಥ್ ಅವರು ಪ್ರಾಣಿಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಸಂಬಂಧಿತ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.