ನವದೆಹಲಿ: ಯೂಟ್ಯೂಬರ್ ಮತ್ತು ಹಿಂದಿಯ ಬಿಗ್‌ಬಾಸ್ ಓಟಿಟಿ ರಿಯಾಲಿಟಿ ಶೋ ವಿಜೇತ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ವಿಶ್ ಯಾದವ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೇ ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಘಟನೆಯಲ್ಲಿ ಸಾಗರ್ ಕೈ –ಕಾಲು ಮತ್ತು ಬೆನ್ನಿನ ಮೇಲೆ ಸಾಕಷ್ಟು ಗಾಯಗಳಾಗಿದ್ದವು. ಇವರಿಬ್ಬರ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಜಗಳ ಶುರುವಾಗಿತ್ತು ಎಂದು ಪೊಲೀಸರು ತಿಳಿಸಿದ್ದರು.
ಇದಕ್ಕೂ ಮುನ್ನ ರೇವ್ ಪಾರ್ಟಿಯೊಂದರಲ್ಲಿ ಹಾವಿನ ವಿಷವನ್ನು ಬಳಸಿದ ಆರೋಪದ ಮೇಲೆ ಪಾರ್ಟಿ ಆಯೋಜಿಸಿದ್ದ ಎಲ್ವಿಶ್ ಯಾದವ್ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.