ADVERTISEMENT

ವೈಎಸ್‌ಆರ್‌ಸಿ ಪೂರ್ಣ ಪಟ್ಟಿ ಬಿಡುಗಡೆ

25 ಲೋಕಸಭೆ, 175 ವಿಧಾನಸಭಾ ಕ್ಷೇತ್ರಗಳಿಗೆ ಹುರಿಯಾಳುಗಳು ಅಂತಿಮ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2019, 12:58 IST
Last Updated 17 ಮಾರ್ಚ್ 2019, 12:58 IST
ವೈ.ಎಸ್. ಜಗನ್‌ಮೋಹನ್ ರೆಡ್ಡಿ
ವೈ.ಎಸ್. ಜಗನ್‌ಮೋಹನ್ ರೆಡ್ಡಿ   

ಅಮರಾವತಿ (ಪಿಟಿಐ): ಆಂಧ್ರಪ್ರದೇಶದ ಪ್ರಮುಖ ವಿರೋಧ ಪಕ್ಷ ವೈಎಸ್‌ಆರ್ ಕಾಂಗ್ರೆಸ್, 25 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜತೆಗೆ 175 ವಿಧಾನಸಭಾ ಕ್ಷೇತ್ರಗಳಿಗೂ ಹುರಿಯಾಳುಗಳನ್ನು ಪ್ರಕಟಿಸಿದೆ.

ವೈಎಸ್‌ಆರ್‌ಸಿ ಪಕ್ಷದ ಅಧ್ಯಕ್ಷ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರು ಕಡಪಾ ಜಿಲ್ಲೆಯ ಇಡುಪುಲಪಾಯದ ತಮ್ಮ ಎಸ್ಟೇಟ್‌ನಲ್ಲಿ ಪಟ್ಟಿ ಪ್ರಕಟಿಸಿದರು.

ಟಿಕೆಟ್ ಪಡೆದ 25 ಅಭ್ಯರ್ಥಿಗಳ ಪೈಕಿ 7 ಮಂದಿ ಹಿಂದುಳಿದ ವರ್ಗ, ನಾಲ್ವರು ಪರಿಶಿಷ್ಟ ಜಾತಿ ಮತ್ತು ಒಬ್ಬರು ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದ್ದಾರೆ. ವಿಧಾನಸಭೆಯ 175 ಅಭ್ಯರ್ಥಿಗಳ ಪೈಕಿ 41 ಮಂದಿ ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಐವರು ಮುಸ್ಲಿಂ ಸಮುದಾಯದವರು.

ADVERTISEMENT

2014ರಲ್ಲಿ ಎಂಟು ಕ್ಷೇತ್ರಗಳಲ್ಲಿ ವೈಎಸ್‌ಆರ್‌ಸಿ ಸಂಸದರು ಆಯ್ಕೆಯಾಗಿದ್ದರು. ಈ ಪೈಕಿ ಇಬ್ಬರು ಸಂಸದರನ್ನು ಈ ಬಾರಿಯೂ ಉಳಿಸಿಕೊಂಡಿದ್ದು, ಉಳಿದ 23 ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.