ಬೆಂಗಳೂರು: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ನೀಡುವ 2012ನೇ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿಗೆ ಅನುಪಮಾ ಪ್ರಸಾದ್ ಅವರ `ದೂರತೀರ' ಕಥಾಸಂಕಲನವು ಆಯ್ಕೆಯಾಗಿದೆ.
ಕೃತಿಯನ್ನು ಬಳ್ಳಾರಿಯ ಪಲ್ಲವ ಪ್ರಕಾಶನ ಸಂಸ್ಥೆಯು ಪ್ರಕಟಿಸಿದೆ. ಪ್ರಶಸ್ತಿಯು ರೂ 25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿರುತ್ತದೆ.
ಜೂನ್ 8 ರಂದು ಮಂಡ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕತೆಗಾರ ಡಾ.ಕೃಷ್ಣಮೂರ್ತಿ ಹನೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾದಂಬರಿಕಾರ ಕುಂ.ವೀರಭದ್ರಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.