ಹರಪನಹಳ್ಳಿ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಇಲಾಖೆ ಕೈಗೊಂಡ ಕಾಮಗಾರಿಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಲಯ ಅರಣ್ಯ ಅಧಿಕಾರಿ ಸೇರಿ ಮೂವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಶಂಕರನಾಯ್ಕ್, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶೇಶಿ (ಹಾಲಿ ಪ್ರಾದೇಶಿಕ ಅರಣ್ಯ ವಿಭಾಗ ದಾವಣಗೆರೆ) ಹಾಗೂ ಹೊರಗುತ್ತಿಗೆ ತಾಂತ್ರಿಕ ಸಹಾಯಕ ಕುಮಾರ ನಾಯ್ಕ್ ಅವರ ವಿರುದ್ಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಮತಾ ಹೊಸಗೌಡರ ಅವರು ಭಾನುವಾರ ಹರಪನಹಳ್ಳಿ ಹಾಗೂ ಅರಸೀಕೆರೆ ಠಾಣೆಗಳಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.