ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ.
ಎಸ್‌ಐಟಿ ತಂಡ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಶ್ವಿನ್ ರಾವ್ ಅವರನ್ನು ಬಂಧಿಸಿದೆ.
ವೈ. ಭಾಸ್ಕರ್ ರಾವ್ ರಾಜೀನಾಮೆ?: ತಮ್ಮ ಪುತ್ರ ಅಶ್ವಿನ್ ರಾವ್ ಬಂಧನವಾಗಿರುವುದರಿಂದ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರು ಸೋಮವಾರ ಸಂಜೆ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಭಾಸ್ಕರ್ ರಾವ್ ಅವರು ನಿರೀಕ್ಷಣಾ ಜಾಮೀನು ಪಡೆಯಲು ವಕೀಲ ಅಶೋಕ್ ಹಾರನಹಳ್ಳಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.