ADVERTISEMENT

ಆಮೂರಗೆ ವಿಶ್ವಮಾನವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2015, 19:30 IST
Last Updated 9 ಡಿಸೆಂಬರ್ 2015, 19:30 IST

ಮೈಸೂರು: ನಗರದ ದೇಜಗೌ ಟ್ರಸ್ಟ್‌ನಿಂದ ಕೊಡಮಾಡುವ 2015ನೇ ಸಾಲಿನ ‘ವಿಶ್ವಮಾನವ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಹಾಗೂ ವಿಮರ್ಶಕ ಡಾ.ಜಿ.ಎಸ್‌. ಆಮೂರರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. 2015ನೇ ಸಾಲಿನ ‘ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿ’ಗೆ ಸಂಸ್ಕೃತ ವಿವಿ ಕುಲಪತಿ ಡಾ.ಪದ್ಮಾಶೇಖರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 20 ಸಾವಿರ ನಗದು, ಫಲಕ ಒಳಗೊಂಡಿದೆ.

ಕುವೆಂಪು ವಿದ್ಯಾವರ್ಧಕ ಟ್ರಸ್ಟ್‌ ವತಿಯಿಂದ ನೀಡುವ 2015ನೇ ಸಾಲಿನ ‘ದಿ.ಎಚ್‌.ಕೆ. ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿ’ಯು ಎಚ್‌.ಆರ್‌. ಶ್ರೀಶ ಅವರಿಗೆ ದೊರೆತಿದೆ. ಈ ಪ್ರಶಸ್ತಿಯು 15 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿಗಳನ್ನು ಡಿ. 29ರ ಬೆಳಿಗ್ಗೆ 11ಕ್ಕೆ ಮೈಸೂರಿನಲ್ಲಿ ನಡೆಯುವ ಕುವೆಂಪು ಜನ್ಮೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.