ಮಂಗಳೂರು: ಎತ್ತಿನ ಹೂಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮಂಗಳವಾರ ಸುಮಾರು ಎರಡೂವರೆ ಗಂಟೆಗಳ ಕಾಲ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಕೆ.ವಸಂತ ಬಂಗೇರ, ಶಕುಂತಲಾ ಶೆಟ್ಟಿ, ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ವಿವಿಧ ಮಠಾಧೀಶರು, ಪರಿಸರ ಹೋರಾಟಗಾರರು ಸಾಥ್ ನೀಡಿದರು.
ಹೆದ್ದಾರಿ ತಡೆಯಿಂದ ವಾಹನ ದಟ್ಟಣೆ ಹೆಚ್ಚಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸುವ ಕೆಲಸ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.