ಬೆಂಗಳೂರು:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಎಸ್.ಆರ್ ಪಾಟೀಲ್ ಅವರು ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದಿದೆ. ಯಾವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.
ಸೋಮವಾರ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಬಾಗಲಕೋಟೆಯ ಅವರ ನಿವಾಸದಲ್ಲಿ ಬಳಿ ಪ್ರತಿಭಟನೆ ಮಾಡಿದ್ರು. ಇದರಿಂದ ಅವರಿಗೆ ಅಸಮಧಾನ ಆಗಿರಬಹುದು. ಈ ಬಗ್ಗೆ ಅವರ ಬಳಿ ಮಾತನಾಡುತ್ತೇನೆ ಎಂದರು.
ಅವರಿಗೆ ಬೇಜಾರಾಗಿದ್ರೆ ಸಮಧಾನಪಡಿಸುವ ಕಾರ್ಯವನ್ನು ನಾವು ಮಾಡುತ್ತೇವೆ. ನಾನು ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಪರಮೇಶ್ವರ್ ಹೇಳಿದರು.
ಬುಧವಾರ ಸಚಿವರ ಪ್ರಮಾಣ ವಚನ
ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲೂ ಗೊಂದಲವಿಲ್ಲ. ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಮೈತ್ರಿ ಸರ್ಕಾರ ನಡೆಸುತ್ತೇವೆ. ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಜಿ.ಪರಮೇಶ್ವರ್ ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.