ADVERTISEMENT

ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಕಿಡಿ

​ಪ್ರಜಾವಾಣಿ ವಾರ್ತೆ
Published 10 ಮೇ 2014, 13:57 IST
Last Updated 10 ಮೇ 2014, 13:57 IST

ಬೆಂಗಳೂರು (ಪಿಟಿಐ): ಕನ್ನಡವನ್ನು ರಾಜ್ಯದ ಆಡಳಿತ ಭಾಷೆಯಾಗಿ ಘೋಷಿಸಿದ್ದರೂ ಸರ್ಕಾರಿ ಕಡತಗಳನ್ನು ತಯಾರಿಸುವ ವೇಳೆ ಕನ್ನಡ ಭಾಷೆ ಬಳಸದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡವನ್ನು ಆಡಳಿತ ಭಾಷೆಯಾಗಿ ಘೋಷಿಸಿಲಾಗಿದೆ. ಆದರೂ ಅಧಿಕಾರಿಗಳು ಕಡತಗಳನ್ನು ಕನ್ನಡದಲ್ಲಿ ತಯಾರಿಸುವ ಕನಿಷ್ಠ ಪ್ರಯತ್ನ ಮಾಡುತ್ತಿಲ್ಲ’ ಎಂದು ಬೇಸರಿಸಿದರು.

ಸಚಿವರು ಹಾಗೂ ಅಧಿಕಾರಿಗಳು ಕನ್ನಡ ಭಾಷೆಯಲ್ಲಿ ವ್ಯವಹರಿಸುವ ಸಾಮರ್ಥ್ಯ ಹೊಂದಿರಬೇಕು ಎಂದು ಅವರು ತಿಳಿಸಿದರು.

ADVERTISEMENT

ಇದೇ ವೇಳೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಭಾಷೆಯ ಅಭಿವೃದ್ಧಿಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಲವು ಶಿಫಾರಸುಗಳನ್ನು ಮಾಡಿದೆ. ಅವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದ್ದು, ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.