ADVERTISEMENT

ಕಲಬುರ್ಗಿ ಹತ್ಯೆ ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2015, 7:25 IST
Last Updated 31 ಆಗಸ್ಟ್ 2015, 7:25 IST

ಬೆಂಗಳೂರು: 'ಕರ್ನಾಟಕದ ಪ್ರಸಿದ್ಧ ಇತಿಹಾಸಕಾರ ಹಾಗೂ ಸಂಶೋಧಕರಾಗಿದ್ದ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆಯನ್ನು ಭೇದಿಸಲು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದರು.

ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಲಬುರ್ಗಿ ಅವರ ಹತ್ಯೆಯ ಸತ್ಯಾಂಶವನ್ನು ಹೊರಗೆಡವಲು ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದರು.

ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಠಾಧೀಶರು ಹಾಗೂ ಕಲಬುರ್ಗಿ ಅವರ ಬೆಂಬಲಿಗರು ಭಾನುವಾರ ಒತ್ತಾಯ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.