ಬೆಂಗಳೂರು: 2014ನೇ ಸಾಲಿನ ನೃಪತುಂಗ ಪ್ರಶಸ್ತಿಗೆ ಸಾಹಿತಿ ಕುಂ. ವೀರಭದ್ರಪ್ಪ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಪುಂಡಲೀಕ ಹಾಲಂಬಿ ಪ್ರಕಟಿಸಿದರು.
ಪ್ರಶಸ್ತಿಯು ರೂ. 7,00,001 ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿಯನ್ನು ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಹಾಲಂಬಿ ಹೇಳಿದರು.
ಕನ್ನಡ ಸಾಹಿತ್ಯಕ್ಕೆ ನೀಡುವ ಮೌಲಿಕ ಕೊಡುಗೆ ಪರಿಗಣಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತಿವೆ. ಇದನ್ನು ಯಾವುದೇ ಕೃತಿಗೆ ನೀಡುವುದಿಲ್ಲ.
ನೃಪತುಂಗ ಪ್ರಶಸ್ತಿ ಪಡೆದವರ ಬದುಕು–ಬರಹ ಕುರಿತು ಡಿ. 17–18ರಂದು ಬೆಂಗಳೂರಿನಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದರು.
ಈ ಬಾರಿಯ ಶ್ರೀವಿಜಯ ಸಾಹಿತ್ಯ ಪ್ರಶಸ್ತಿ ಡಾ. ಕವಿತಾ ರೈ ಅವರಿಗೆ ಸಂದಿದೆ. ಇದನ್ನು ನ. 26ರಂದು ಸಾಹಿತ್ಯ ಪರಿಷತ್ತಿಗೆ ಸಭಾಂಗಣದಲ್ಲಿ ಪ್ರದಾನ ಮಾಡಲಾಗುವುದು. ಇದು ರೂ. 1,11,111 ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.