ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಕೇಂದ್ರೀಯ ಹಿಂದಿ ಸಂಸ್ಥಾನ ನೀಡುವ 2013ನೇ ಸಾಲಿನ ‘ಗಣೇಶ ಶಂಕರ ವಿದ್ಯಾರ್ಥಿ ಪುರಸ್ಕಾರ’ಕ್ಕೆ ಕನ್ನಡ ಮತ್ತು ಹಿಂದಿ ಸಾಹಿತ್ಯ ವಿದ್ವಾಂಸರಾದ ಡಾ.ಬಿ.ವೈ. ಲಲಿತಾಂಬ ಆಯ್ಕೆಯಾಗಿದ್ದಾರೆ.
ಪುರಸ್ಕಾರವು ₨1ಲಕ್ಷ ನಗದು ಒಳಗೊಂಡಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿದ್ಯಾರ್ಥಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.