ADVERTISEMENT

ಜ್ಯೋತಿ ಗುರುಪ್ರಸಾದ್‌ಗೆ ಮುದ್ದಣ ಕಾವ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 19:30 IST
Last Updated 30 ಅಕ್ಟೋಬರ್ 2017, 19:30 IST
ಜ್ಯೋತಿ ಗುರುಪ್ರಸಾದ್
ಜ್ಯೋತಿ ಗುರುಪ್ರಸಾದ್   

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್‌ ಪ್ರಾಯೋಜಕತ್ವದ 2017ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯು, ಮೈಸೂರು ಜಿಲ್ಲೆಯ ಟಿ. ನರಸೀಪುರದ ಜ್ಯೋತಿ ಗುರುಪ್ರಸಾದ್ ಅವರ ‘ಜಟಾಯು ಪಕ್ಷಿಗೆ ಶ್ರದ್ಧಾಂಜಲಿ’ ಎಂಬ ಕವನ ಸಂಕಲನಕ್ಕೆ ಲಭಿಸಿದೆ.

ಸ್ಪರ್ಧೆಗೆ ಒಟ್ಟು 95 ಹಸ್ತಪ್ರತಿಗಳು ಬಂದಿದ್ದು, ‘ಜಟಾಯು ಪಕ್ಷಿಗೆ ಶ್ರದ್ಧಾಂಜಲಿ’ ಎನ್ನುವ ಹಸ್ತಪ್ರತಿಯು ಸರ್ವಶ್ರೇಷ್ಠ ಕೃತಿ ಎಂದು ಪ್ರೊ. ಮಲ್ಲೇ ಪುರಂ ಜಿ. ವೆಂಕಟೇಶ್, ಬೆಳಗೋಡು ರಮೇಶ ಭಟ್, ಸುಬ್ರಾಯ ಚೊಕ್ಕಾಡಿ ಅವರು ನೀಡಿದ ಅಂಕಗಳ ಆಧಾರದಲ್ಲಿ ನಿರ್ಣಯಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ನಾ ಮೊಗಸಾಲೆ ತಿಳಿಸಿದ್ದಾರೆ.

1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ₹10 ಸಾವಿರದ ಗೌರವ ಸಂಭಾವನೆ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರುವರಿಯಲ್ಲಿ ಕಾಂತಾವರದ ಕನ್ನಡ ಭವನದಲ್ಲಿ ನಡೆಯಲಿದ್ದು ಪ್ರಶಸ್ತಿಯ ಪ್ರಾಯೋಜಕರಾದ ಹರಿ ಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಂಘದ ಕಾರ್ಯ ದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.