ಬೆಂಗಳೂರು: ನಟ ಡಾ.ರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಬುಧವಾರ ಬೆಳಿಗ್ಗೆ ನಿಧನರಾದರು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.
ಕಂಠೀರವ ಸ್ಟುಡಿಯೊದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
*
ಪಾರ್ವತಮ್ಮ ಅವರು1939ರಲ್ಲಿ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಜನಿಸಿದ್ದರು. 1953ರಲ್ಲಿ ರಾಜ್‌ಕುಮಾರ್ ಅವರೊಂದಿಗೆ ಪಾರ್ವತಮ್ಮ ಅವರ ವಿವಾಹವಾಗಿತ್ತು. ವಜ್ರೇಶ್ವರಿ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಅವರು ಹಲವು ಚಿತ್ರಗಳನ್ನು ನಿರ್ಮಿಸಿದ್ದರು.
ಪಾರ್ವತಮ್ಮ ಅವರು ನಿರ್ಮಿಸಿದ ಮೊದಲ ಚಿತ್ರ ‘ತ್ರಿಮೂರ್ತಿ’. ‘ಹಾಲು ಜೇನು’, ‘ಕವಿರತ್ನ ಕಾಳಿದಾಸ’, ‘ಜೀವನ ಚೈತ್ರ’ ಸೇರಿದಂತೆ ಸುಮಾರು 80 ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.