ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುಮಾರು ನಾಲ್ಕು ತಾಸು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ.
ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಜಲಸಂಪನ್ಮೂಲ ಸಚಿವ ಎಂ. ಬಿ.ಪಾಟೀಲ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.