ಬೆಂಗಳೂರು: ಇತಿಹಾಸತಜ್ಞ ಪ್ರೊ.ಕೆ.ಟಿ. ಪಾಂಡುರಂಗಿ (98) ಅವರು ಜಯನಗರದಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ನಿಧನರಾದರು.
ಅವರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಚಾಮರಾಜಪೇಟೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಸಂಜೆ 6.30ಕ್ಕೆ ಅಂತ್ಯಕ್ರಿಯೆ ನಡೆಯಿತು.
ಅವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿಯಲ್ಲಿ 1918ರಲ್ಲಿ ಜನಿಸಿದರು. ಸಾಂಗ್ಲಿ ಮತ್ತು ಮೈಸೂರಿನ ಮಹಾರಾಜ ಸಂಸ್ಕೃತ ಕಾಲೇಜಿನಲ್ಲಿ ‘ನ್ಯಾಯ’ ಮತ್ತು ‘ವೇದಾಂತ’ವನ್ನು ಆಳವಾಗಿ ಅಧ್ಯಯನ ಮಾಡಿದ ನಂತರ ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಬಿ.ಎ., ಎಂ.ಎ. ಪದವಿ ಪಡೆದರು.
ಬೆಂಗಳೂರು ವಿ.ವಿ ಸಂಸ್ಕೃತ ವಿಭಾಗದಲ್ಲಿ ಶಿಕ್ಷಕರಾಗಿ, ಮುಖ್ಯಸ್ಥರಾಗಿ 35 ವರ್ಷ ಕೆಲಸ ಮಾಡಿದ್ದರು. ಅಪರೂಪದ ಸಂಸ್ಕೃತ ಹಸ್ತಪ್ರತಿಗಳನ್ನು ಸಂಗ್ರಹಿಸಿ, ಅವುಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸಿದ್ದರು. ವೇದಾಂತ ಮತ್ತು ಪೂರ್ವ ಮೀಮಾಂಸೆಯನ್ನು ಕನ್ನಡ ಮತ್ತು ಇಂಗ್ಲಿಷ್‌ಗೆ ಭಾಷಾಂತರಿಸಿದ್ದರು. ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ 13 ವರ್ಷ ಕೆಲಸ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.