ಹಾಸನ: ಅಖಿಲ ಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 1ರಿಂದ 3ರವರೆಗೆ ನಡೆಯಲಿದೆ. ಸಮ್ಮೇಳನವನ್ನು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಆಯೋಜಿಸಲು ಈ ಹಿಂದೆಯೇ ಸಾಹಿತ್ಯ ಪರಿಷತ್ತು ತೀರ್ಮಾನಿಸಿತ್ತು.
ಹಾಸನ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಸಾಹಿತ್ಯ ಸಮ್ಮೇಳನ ಕುರಿತು ಭಾನುವಾರ ಆಯೋಜಿಸಿದ್ದ ಮೊದಲ ಸಮಾಲೋಚನಾ ಸಭೆಯಲ್ಲಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಮ್ಮೇಳನದ ದಿನಾಂಕವನ್ನು ಘೋಷಿಸಿದರು.
ಸಂಸದ ಎಚ್.ಡಿ. ದೇವೇಗೌಡ ಮಾತನಾಡಿ, ‘ಸಮ್ಮೇಳನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಸರ್ಕಾರವೂ ಹೆಚ್ಚಿನ ಸಹಕಾರ ನೀಡಬೇಕು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಉಪಸಮಿತಿಗಳನ್ನು ರಚಿಸಲು ಮುಂದಾಗಬೇಕು’ ಎಂದರು.
ಸಮ್ಮೇಳನದ ಲಾಂಛನ ತಯಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿದ್ದವರು ಸಲಹೆ, ಸೂಚನೆಗಳನ್ನು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.