ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನದಿಂದ ನೀಡಲಾಗುವ ಸಾಹಿತ್ಯ ಪ್ರಶಸ್ತಿಗೆ ಎಂ. ಅಬ್ದುಲ್ ರೆಹಮಾನ್ ಪಾಷ ಅವರ ‘ನಂಬಿಕೆ, ಮೂಢನಂಬಿಕೆ, ವೈಜ್ಞಾನಿಕ ಮನೋವೃತ್ತಿ’ (ವೈಚಾರಿಕ) ಹಾಗೂ ಶ್ರೀಧರ್ ಬಳಗಾರ ಅವರ ‘ಆಡುಕಳ’ (ಕಾದಂಬರಿ) ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಸಾಹಿತಿ ಬೋಳುವಾರು ಮಹಮದ್ ಕುಂಞ ಅವರು ಡಿ. 26ರಂದು ಸಂಜೆ 5.30ಕ್ಕೆ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ. ಕಮಲಾ ಹಂಪನಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.