ರಾಯಚೂರು: ‘ರೈತರ ಒಪ್ಪಿಗೆ ಇಲ್ಲದೆ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಸುಗ್ರಿವಾಜ್ಞೆ ಹೆಸರಲ್ಲಿ ಮುಂದಾದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ’ ಎಂದು ಉಡುಪಿ ಪೇಜಾವರಮಠದ ವಿಶ್ವೇಶತೀರ್ಥ ಸ್ವಾಮೀಜಿ ಮಂಗಳವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಭಿವೃದ್ಧಿ ಹೆಸರಲ್ಲಿ ರೈತರ ಜಮೀನು ಪಡೆಯುವಾಗ ಅನ್ಯಾಯ ಆಗಬಾರದು’ ಎಂದರು. ‘ಯಾರೇ ಹಿಂದೂ ಸಂಘಟನೆ ಕಟ್ಟಲು ಮುಂದಾದರೆ ಸ್ವಾಗತ ಮಾಡುತ್ತೇನೆ. ಭಯೋತ್ಪಾದನಾ ಕೃತ್ಯಗಳಲ್ಲಿ ಹಿಂದುಗಳಿಗಿಂತ ಮುಸ್ಲಿಮರು ಹೆಚ್ಚಾಗಿರುತ್ತಾರೆ. ಹಾಗಂತ ನಾನು ಮುಸ್ಲಿಂ ಸಮುದಾಯವನ್ನು ವಿರೋಧಿಸುವವನಲ್ಲ. ಎಲ್ಲ ಧರ್ಮೀಯರು ಕೂಡಿ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ತಡೆಯಲು ಹೋರಾಟಕ್ಕೆ ಮುಂದಾಗಬೇಕಾದುದು ಅವಶ್ಯವಿದೆ’ ಎಂದು ಹೇಳಿದರು.
‘ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಎಂಬ ತಾರತಮ್ಯ ಧೋರಣೆ ಅನುಸರಿಸಬಾರದು. ಸರ್ವರಿಗೂ ಸಮನಾದ ಸೌಕರ್ಯ ಕಲ್ಪಿಸಬೇಕು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಯಾವುದೇ ಅಸಮಾಧಾನವಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.