ಬೆಂಗಳೂರು: ‘ಮಾತೆತ್ತಿದರೆ ಜೈಲಿಗೆ ಹೋಗಿ ಬಂದವರು ಎಂದು ಟೀಕಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ನಿಂದನೆ ಮಾಡುತ್ತಿದ್ದು, ನನ್ನ ಮಾನಹಾನಿಗೆ ಕಾರಣರಾಗಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಪ್ರಸಾರ ಭಾರತಿ ಹಾಗೂ ಭಾರತೀಯ ಪತ್ರಿಕಾ ಮಂಡಳಿಗೆ ತುರ್ತು ನೋಟಿಸ್ ಜಾರಿ
ಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ‘ಈ ವಿಷಯ ಸಾರ್ವಜನಿಕವಾಗಿ ಅತ್ಯಂತ ಮಹತ್ವದ್ದಾಗಿದೆ. ಆದ ಕಾರಣ ಇದರ ಬಗ್ಗೆ ವಿವರವಾದ ವಿಚಾರಣೆ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಜಿ.ಪರಮೇಶ್ವರ, ದಿನೇಶ್ ಗುಂಡೂರಾವ್, ಸಚಿವ ಎಂ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಇಬ್ರಾಹಿಂ, ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಸೇರಿದಂತೆ 29 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.