ಮೈಸೂರು: ರಂಗಕರ್ಮಿ ಏಣಗಿ ಬಾಳಪ್ಪ, ಗಾಯಕಿ ಪ್ರೊ.ಗೌರಿ ಕುಪ್ಪುಸ್ವಾಮಿ ಹಾಗೂ ವಯಲಿನ್ ವಾದಕಿ ಪ್ರೊ.ಎನ್.ರಾಜಂ ಅವರಿಗೆ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಈ ಮೂವರಿಗೆ ಕ್ರಮವಾಗಿ ರಂಗಭೂಮಿ, ಕರ್ನಾಟಕ ಸಂಗೀತ (ಗಾಯನ) ಹಾಗೂ ಹಿಂದೂಸ್ತಾನಿ ಸಂಗೀತ (ವಾದ್ಯ) ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ನೀಡಲಾಗುತ್ತಿದೆ ಎಂದು ವಿ.ವಿ ಕುಲಪತಿ ಸರ್ವಮಂಗಳಾ ಶಂಕರ್ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾರ್ಚ್ 7ರಂದು ಇಲ್ಲಿನ ನಿತ್ಯೋತ್ಸವ ಸಭಾಂಗಣದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಎರಡನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡುವರು. ಪಿಟೀಲು ವಾದಕ ವಿದ್ವಾನ್ ಎಲ್.ಸುಬ್ರಮಣಿಯಂ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. 47 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 17 ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.