ಬೆಂಗಳೂರು (ಪಿಟಿಐ): ಮೇ 29ರಿಂದ ಕೆಲವು ದಿನಗಳ ಕಾಲ ನೂತನ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಳಿಸಿದ್ದಾರೆ.
ಇಲ್ಲಿ ತಮ್ಮ ಸಚಿವ ಸಂಪುಟದ ಸಭೆ ನಡೆಸಿದ ಸಿದ್ದರಾಮಯ್ಯ ನಂತರ ಬಹುತೇಕ ಮೇ 29ರಂದು ವಿಧಾನ ಮಂಡಲ ಅಧಿವೇಶನ ಕರೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಇದೇ ವೇಳೆ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಶಾಸಕ ಕಾಗೋಡು ತಿಮ್ಮಪ್ಪ ಅವರು ವಿಧಾನಸಭಾ ಅಧ್ಯಕ್ಷರಾಗಿ ಆಗಿ ಆಯ್ಕೆಯಾಗುವರು ಎಂದು ಸ್ಪಷ್ಟಪಡಿಸಿದರು.
ಸುಮಾರು 45 ನಿಮಿಷ ಸಂಪುಟ ಸಭೆ ನಡೆಸಿದ ಅವರು ಕೆಲವು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಂಡರು. ಆಡಳಿತಾತ್ಮಕ ವಿಚಾರಗಳು ಮತ್ತು ವಿಧಾನಸಭೆ ಅಧಿಕವೇಶನ ಕರೆಯುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಸಭೆಯು ಮುಖ್ಯಮಂತ್ರಿಯವರಿಗೆ ನೀಡಿತು.
ಯಾವೊಬ್ಬ ವಿಧಾನಪರಿಷತ್ ಸದಸ್ಯರಿಗೂ ಸಚಿವ ಸ್ಥಾನ ನೀಡದಿರುವುದರ ಕುರಿತು ಎದುರಾದ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಒಬ್ಬರು ಪರಿಷತ್ ಸದಸ್ಯರನ್ನು ಸಂಪುಟಕ್ಕೆ ಸದ್ಯದಲ್ಲೆ ತೆಗೆದುಕೊಳ್ಳುವುದಾಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.