ADVERTISEMENT

ರಾಜ್ಯಸಭೆ ಚುನಾವಣೆ: ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಮತ ಚಲಾವಣೆ ಗೊಂದಲ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 7:51 IST
Last Updated 23 ಮಾರ್ಚ್ 2018, 7:51 IST
ರಾಜ್ಯಸಭೆ ಚುನಾವಣೆ: ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಮತ ಚಲಾವಣೆ ಗೊಂದಲ
ರಾಜ್ಯಸಭೆ ಚುನಾವಣೆ: ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಮತ ಚಲಾವಣೆ ಗೊಂದಲ   

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆಯುತ್ತಿರುವ  ಚುನಾವಣೆಯಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಅವರು ಬೇರೆ ಅಭ್ಯರ್ಥಿಗೆ ಮತ ಹಾಕಿದ್ದು ಗೊಂದಲಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಗೋಡು ತಿಮ್ಮಪ್ಪ ಹಾಗೂ ಬಾಬುರಾವ್‌ ಚಿಂಚನಸೂರ್ ಅವರಿಗೆ ಮರು ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂಕ್ ಮಿಸ್ಟೆಕ್‌ನಿಂದ ಈ ಪ್ರಮಾದವಾಗಿದ್ದು ಮರು ಮತದಾನಕ್ಕೆ ಅವಕಾಶ ಮಾಡಿಕೊಟ್ಟಿರುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ನಡೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಖಂಡಿಸಿದ್ದು ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿವೆ.

ಜೆಡಿಎಸ್ ಪಕ್ಷದ ಶಾಸಕರು ಸಭೆ ನಡೆಸುತ್ತಿದ್ದು ಚುನಾವಣೆ ಬಹಿಷ್ಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ADVERTISEMENT

ಮೂರನೇ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್‌ ಹಾಗೂ ಜೆಡಿಎಸ್‌ ಅಭ್ಯರ್ಥಿ ಬಿ.ಎಂ.ಫಾರೂಕ್‌ ನಡುವೆ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಹಣಾಹಣಿ ನಡೆಯುವ ನಿರೀಕ್ಷೆ ಇದೆ.

ವಿಧಾನಸಭೆ ಒಟ್ಟು ಸದಸ್ಯರ ಸಂಖ್ಯೆ 217. ಇದರಲ್ಲಿ 7 ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್‌ 123, ಬಿಜೆಪಿ 43 ಹಾಗೂ ಜೆಡಿಎಸ್‌ (ಏಳು ಬಂಡಾಯ ಶಾಸಕರೂ ಸೇರಿ) 37 ಸದಸ್ಯರಿದ್ದಾರೆ. ಪ್ರತಿ ಅಭ್ಯರ್ಥಿ ಗೆಲ್ಲಲು 44 ಮತಗಳು ಬೇಕಾಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.