ತುಮಕೂರು: ವೀಚಿ ಸಾಹಿತ್ಯ ಪ್ರತಿಷ್ಠಾನವು 2016ರ ವಿಚೀ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಬೆಂಗಳೂರಿನ ಲೇಖಕಿ ಡಾ.ಬಿ.ಎನ್.ಸುಮಿತ್ರಾಬಾಯಿ ಅವರು ಬರೆದ ‘ಸ್ತ್ರೀ ದರ್ಪಣದಲ್ಲಿ ನಾಟ್ಯಶಾಸ್ತ್ರ’ ಕೃತಿ ವೀಚಿ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಕವಿ ಡಾ.ನಾಗಣ್ಣ ಕಿಲಾರಿ ಅವರು ಬರೆದ ‘ತಪಸ್ಸಿಗಿಳಿದ ಮಳೆ’ ಕವನ ಸಂಕಲನವು ವೀಚಿ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು ₹ 5 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.
ಪ್ರೊ.ಎಂ.ಎಚ್.ಕೃಷ್ಣಯ್ಯ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಪ್ರಶಸ್ತಿಗಳನ್ನು ಆಯ್ಕೆ ಮಾಡಿದೆ ಎಂದು ವೀಚಿ ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎಚ್.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.