ಬೆಂಗಳೂರು: ನಿಘಂಟು ತಜ್ಞ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರಿಗೆ 2014ನೇ ಸಾಲಿನ ಪಂಪ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿಯು 3 ಲಕ್ಷ ನಗದು ಮತ್ತು ಸನ್ಮಾನ ಫಲಕ ಒಳಗೊಂಡಿದೆ.
ವಿಷ್ಣು ನಾಯಕ್ ಅಧ್ಯಕ್ಷತೆಯ ಸಮಿತಿಯು ಅವರನ್ನು ಆಯ್ಕೆ ಮಾಡಿದೆ. ಫೆ.7ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.