ಮೈಸೂರು: ಬೆಂಗಳೂರಿನ ಮಹಾರಾಣಿ ಕಲಾ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಈಚೆಗೆ ನಿವೃತ್ತರಾದ ಪ್ರೊ.ಸರ್ವಮಂಗಳಾ ಶಂಕರ್ ಅವರನ್ನು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಕುಲಪತಿಯಾಗಿ ಸರ್ಕಾರ ನೇಮಕ ಮಾಡಿದೆ.
ಸಂಗೀತ ವಿಷಯದಲ್ಲಿ ಎಂ.ಎ, ಎಂ.ಫಿಲ್ ಮತ್ತು ಪಿಎಚ್.ಡಿ ಪದವಿ ಗಳಿಸಿರುವ ಇವರು ಸಂಗೀತ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಮಿಕ್ಕಿ ಸೇವೆ ಸಲ್ಲಿಸಿದ್ದಾರೆ.
ಸರ್ವಮಂಗಳಾ ಅವರು ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ.ಕುಲಸಚಿವ ಪ್ರೊ. ಸಿದ್ದೇಗೌಡ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.