ಬೆಂಗಳೂರು: 2015ನೇ ಸಾಲಿನ ‘ಪಂಪ ಪ್ರಶಸ್ತಿ’ಗೆ ಪ್ರೊ.ಬಿ.ಎ. ಸನದಿ ಅವರನ್ನು ಆಯ್ಕೆ ಮಾಡಲಾಗಿದೆ. ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯು ನೇಮಿಚಂದ್ರ ಅವರಿಗೆ ಲಭಿಸಿದೆ.
ಮಹಾರಾಷ್ಟ್ರದ ಜತ್ತ ಪ್ರದೇಶದಲ್ಲಿ ಕನ್ನಡ ಶಾಲೆಗಳ ಉಳಿವಿಗಾಗಿ ಕೆಲಸ ಮಾಡುತ್ತಿರುವ ಎಂ.ಎಸ್. ಸಿಂಧೂರ ಅವರನ್ನು ‘ಪ್ರೊ.ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯು ರಾಯಚೂರಿನ ಜಂಬಣ್ಣ ಅಮರಚಿಂತ ಅವರಿಗೆ ಲಭಿಸಿದೆ.
ನಾಲ್ಕೂ ಪ್ರಶಸ್ತಿಗಳು ತಲಾ ₹ 3 ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿವೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.