ಬೆಂಗಳೂರು: ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಒಟ್ಟು 2,198 ಹುದ್ದೆಗಳು ಖಾಲಿ ಇವೆ ಎಂದು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ವಿಧಾನ ಪರಿಷತ್ತಿಗೆ ತಿಳಿಸಿದರು.
ಬಿಜೆಪಿಯ ಅರುಣ ಶಹಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಾಯ್ಕ್, ‘5,031 ಮಂಜೂರು ಹುದ್ದೆಗಳಲ್ಲಿ 2,833 ಭರ್ತಿಯಾಗಿವೆ’ ಎಂದರು. ಕಿರಿಯ ತರಬೇತಿ ಅಧಿಕಾರಿಗಳ 446 ಹುದ್ದೆಗಳ ಭರ್ತಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗವನ್ನು ಕೋರಲಾಗಿದೆ ಎಂದರು. ಆದರೆ ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಆಯೋಗದಿಂದ ಸೆಪ್ಟೆಂ ಬರ್ ವೇಳೆಗೆ ಹೊರಬೀಳುವ ಸಾಧ್ಯತೆ ಇದೆ ಎಂದು ಪರಮೇಶ್ವರ ನಾಯ್ಕ್ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.