ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ಏಳು ಲಕ್ಷದ ಒಂದು ರೂಪಾಯಿ ನಗದು, ಫಲಕ, ಪ್ರಶಸ್ತಿಪತ್ರ, ಸ್ಮರಣಿಕೆ ಒಳಗೊಂಡಿದೆ. ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್, ವಿದ್ವಾಂಸ ವೀರಣ್ಣ ರಾಜೂರ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಎ.ಎನ್. ಪ್ರಕಾಶಗೌಡ, ಕಾರ್ಮಿಕ ಕಲ್ಯಾಣಾಧಿಕಾರಿ ವಿಜಯಕುಮಾರ್ ರೈ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ. ಚನ್ನೇಗೌಡ ಒಳಗೊಂಡ ಆಯ್ಕೆ ಸಮಿತಿ ಭೈರಪ್ಪ ಅವರನ್ನು ಈ ಪ್ರಶಸ್ತಿಗೆ ಮಾಡಿದೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.
ಮಯೂರ ವರ್ಮ ಸಾಹಿತ್ಯ ಪ್ರಶಸ್ತಿ: 45 ವರ್ಷದೊಳಗಿನ ಸಾಹಿತಿಗಳಿಗೆ ನೀಡುವ ‘ಮಯೂರ ವರ್ಮ ಪ್ರಶಸ್ತಿ’ಗೆ ರಾಮಲಿಂಗೇಶ್ವರ(ಸಿಸಿರಾ), ಸಿ. ನಂದಿನಿ, ಶಾಂತಿ ಕೆ. ಅಪ್ಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ₹ 25,000 ನಗದು ಪುರಸ್ಕಾರವನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.