ADVERTISEMENT

ಹಿರಿಯ ನಿರ್ದೇಶಕ ಕೆ.ಎಸ್‌.ಎಲ್‌.ಸ್ವಾಮಿ ನಿಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2015, 6:45 IST
Last Updated 20 ಅಕ್ಟೋಬರ್ 2015, 6:45 IST

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ಎಸ್.ಎಲ್‌ ಸ್ವಾಮಿ ಅವರು ಮಂಗಳವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸ್ವಾಮಿ ಅವರು ಮನೆಗೆ ಬಂದಿದ್ದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಕೆ.ಎಸ್‌.ಎಲ್‌ ಸ್ವಾಮಿ ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕನ್ನಡದಲ್ಲಿ 35 ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಜಿಮ್ಮಿಗಲ್ಲು, ಮಲೆಯ ಮಾರುತ, ಮುತ್ತೈದೆಭಾಗ್ಯ, ಹಿಮಪಾತ, ದೇವರು ಕೊಟ್ಟ ತಂಗಿ ಇವರು ನಿರ್ದೇಶಿಸಿದ್ದ ಜನಪ್ರಿಯ ಚಿತ್ರಗಳು.

ಸ್ವಾಮಿ ನಿರ್ದೇಶಿಸಿದ್ದ  ಮಕ್ಕಳ ಚಿತ್ರ ಜಂಬೂಸವಾರಿಗೆ ಸ್ವರ್ಣಕಮಲ ಪ್ರಶಸ್ತಿ ಸಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT