ಹಾಸನ: ‘ಸಾಹಿತ್ಯ ಸಮ್ಮೇಳನ ಬಹಿಷ್ಕರಿಸುವ ಮೂಲಕ ಪ್ರಭುತ್ವವನ್ನು ಎಚ್ಚರಿಸಲು ಸಾಧ್ಯವಿಲ್ಲ. ಸಮ್ಮೇಳನ ಬಹಿಷ್ಕರಿಸುವುದರಿಂದ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಾಗುವುದಾದರೆ, ಸಮ್ಮೇಳನಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಾನು ಸಿದ್ಧ’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.
ಶ್ರವಣಬೆಳಗೊಳದಲ್ಲಿ ನಡೆಯ ಲಿರುವ ಅಖಿಲಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಗಾಗಿ ಬುಧವಾರ ರಾತ್ರಿ ಇಲ್ಲಿ ಆಯೋಜಿಸಿದ್ದ ಎರಡನೇ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
‘ಸರ್ಕಾರ ಶಿಕ್ಷಣದಲ್ಲಿ ಕನ್ನಡ ಮಾಧ್ಯಮವನ್ನು ಕಡ್ಡಾಯಗೊಳಿಸು ವವರೆಗೆ ಇಂಥ ಸಮ್ಮೇಳನಗಳನ್ನು ಬಹಿಷ್ಕರಿಸಬೇಕು’ ಎಂದು ಸಾಹಿತಿ ದೇವನೂರ ಮಹದೇವ ಈಚೆಗೆ ಹೇಳಿಕೆ ನೀಡಿ, ಸಮ್ಮೇಳನದ ಅಧ್ಯಕ್ಷರಾಗಲು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಭೆಯಲ್ಲಿ ದೇವನೂರರ ಹೆಸರು ಉಲ್ಲೇಖಿಸದೆ ಮಾತನಾಡಿದ ಹಾಲಂಬಿ, ‘ಸಾಹಿತ್ಯ ಸಮ್ಮೇಳನಗಳು ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವ ಹೋರಾಟಕ್ಕೆ ಬುನಾದಿ ಆಗಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.