ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಮುಗಿದಿದ್ದು, ಫಲಿತಾಂಶ ಇದೇ ತಿಂಗಳ ಕೊನೆಯಲ್ಲಿ ಪ್ರಕಟವಾಗಬೇಕಾಗಿದೆ.
ಅಲ್ಲದೆ, ರಾಜ್ಯ ಸರ್ವ ಶಿಕ್ಷಣ ಅಭಿಯಾನ ಯೋಜನಾ ನಿರ್ದೇಶಕ ಡಾ.ಎಂ.ಟಿ.ರೇಜು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.
ಈ ಸಂಬಂಧ ಮಂಗಳವಾರ ರಾತ್ರಿ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.