ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗಳಿಗೆ 2022–23ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದ್ದ ತಲಾ ₹10 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಕಳೆದ ಸಾಲಿನ ಹಣ ನೀಡುವಂತೆಯೂ ವಿಧಾನ ಮಂಡಲ ಅಧಿವೇಶನದಲ್ಲೂ ಒತ್ತಾಯಿಸಲಾಗಿತ್ತು. ಬಾಕಿ ಉಳಿದಿದ್ದ ಹಣ ನೀಡುವ ಜತೆಗೆ 2023–24ನೇ ಸಾಲಿನಲ್ಲೂ ತಲಾ ₹10 ಕೋಟಿ ನೀಡಲು ಮುಖ್ಯಮಂತ್ರಿ ಸಹಿ ಹಾಕಿದ್ದಾರೆ. ಇದರಿಂದ ಸಮುದಾಯದ ಜನರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಿ.ಎಸ್.ಅರುಣ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.