ಮೈಸೂರು: '10ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ.
ಯಾರ್ಯಾರು ಬರಲಿದ್ದಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದದವರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.