ADVERTISEMENT

ನಾಳೆಯಿಂದ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ: ಬೇಡಿಕೆ ಏನು?

ಇದರಿಂದಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

​ಪ್ರಜಾವಾಣಿ ವಾರ್ತೆ
Published 5 ಮೇ 2024, 16:09 IST
Last Updated 5 ಮೇ 2024, 16:09 IST
<div class="paragraphs"><p>108 ಆಂಬುಲೆನ್ಸ್</p></div>

108 ಆಂಬುಲೆನ್ಸ್

   

ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ ‘108-ಆರೋಗ್ಯ ಕವಚ’ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸೋಮವಾರ ರಾತ್ರಿ 8 ಗಂಟೆಯಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಿಂದಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. 

ಯೋಜನೆಯನ್ನು ಜಿವಿಕೆ–ಇಎಂಆರ್‌ಐ ಸಂಸ್ಥೆ ನಿರ್ವಹಿಸುತ್ತಿದ್ದು, 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ನಿಗದಿಪಡಿಸಿದ ವೇತನದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಅರ್ಧದಷ್ಟು ವೇತನ ಮಾತ್ರ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ’ ಎಂದು ಆರೋಪಿಸಿರುವ ಸಿಬ್ಬಂದಿ, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.

ADVERTISEMENT

ಬಾಕಿ ವೇತನ ಪಾವತಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಾಗೂ ಸಂಸ್ಥೆ ಸೋಮವಾರ ಕ್ರಮಕೈಗೊಂಡಲ್ಲಿ ಮುಷ್ಕರದಿಂದ ಹಿಂದೆ ಸರಿಯುವುದಾಗಿ 108 ನೌಕರರ ಸಂಘ ತಿಳಿಸಿದೆ. 

‘ನಿಯಮಿತವಾಗಿ ವೇತನ ನೀಡದಿದ್ದರಿಂದ ಜೀವನ ನಡೆಸುವುದು ಸಿಬ್ಬಂದಿಗೆ ಕಷ್ಟವಾಗಿದೆ. ಆದ್ದರಿಂದ ಅನಿವಾರ್ಯವಾಗಿ ಮುಷ್ಕರ ಕೈಗೊಂಡಿದ್ದೇವೆ. ಸೇವೆಗೆ ಹಾಜರಾದರೂ ಆಂಬುಲೆನ್ಸ್‌ಗಳನ್ನು ರಸ್ತೆಗಿಳಿಸುವುದಿಲ್ಲ. ಶನಿವಾರ ರಾತ್ರಿಯಿಂದಲೆ ನಿರ್ವಹಿಸಿದ ಪ್ರಕರಣಗಳ ಮಾಹಿತಿಯನ್ನು ಸಂಸ್ಥೆಗೆ ನೀಡುತ್ತಿಲ್ಲ’ ಎಂದು 108 ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಎಚ್. ಪರಮಶಿವ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.