ADVERTISEMENT

ಮುಂದಿನ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ : ಆಹಾರ ಸಚಿವ ಕೆ.ಎಚ್. ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 15:30 IST
Last Updated 28 ಸೆಪ್ಟೆಂಬರ್ 2023, 15:30 IST
<div class="paragraphs"><p>ಅಕ್ಕಿ</p></div>

ಅಕ್ಕಿ

   

ಬೆಂಗಳೂರು: 'ಅನ್ನಭಾಗ್ಯ ಯೋಜನೆಯಡಿ ಮುಂದಿನ ತಿಂಗಳಿಂದ 10 ಕೆಜಿ ಅಕ್ಕಿ ನೀಡಲಾಗುವುದು. ಬರಪೀಡಿತವೆಂದು ಘೋಷಿಸಿದ ತಾಲ್ಲೂಕುಗಳಲ್ಲಿ ಮೊದಲು ಹಂಚಿಕೆ ಮಾಡಲಾಗುವುದು’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಸದ್ಯ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡಲು ಅಗತ್ಯವಾದ ಅಕ್ಕಿ ಸಿಗದ ಕಾರಣ, ಅಕ್ಕಿ ಬದಲು ಹಣ ನೀಡಲಾಗುತ್ತಿದೆ’ ಎಂದರು.

ADVERTISEMENT

‘ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ತಿಂಗಳಿನಿಂದ ಹಣದ ಬದಲು ಅಕ್ಕಿ  ನೀಡುತ್ತೇವೆ. ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರಿಗೂ ತಲಾ 10 ಕೆ.ಜಿ. ಅಕ್ಕಿ ಹಂಚಿಕೆ ಮಾಡಲಾಗುವುದು’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.