ಬೆಂಗಳೂರು: ಶೀಘ್ರವೇ 1,250 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅವರು ಗುರುವಾರ ವಿಧಾನಸಭೆಯಲ್ಲಿ ಬಿಜೆಪಿಯ ಡಾ.ಅವಿನಾಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು.
6,500 ಮಂಜೂರಾದ ಹುದ್ದೆಗಳಲ್ಲಿ 5,000 ಭರ್ತಿ ಆಗಿವೆ. 1,250 ಹುದ್ದೆಗಳ ಭರ್ತಿ ನಂತರವೂ 250 ಹುದ್ದೆಗಳು ಖಾಲಿ ಉಳಿಯುತ್ತವೆ. ಮುಂಬರುವ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುವುದು. ಅಲ್ಲದೇ, 310 ಪ್ರಾಂಶುಪಾಲರ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದರು.
ಸದ್ಯ, ಅತಿಥಿ ಉಪನ್ಯಾಸಕರಿಗೆ ಹಲವು ಜವಾಬ್ದಾರಿಗಳನ್ನು ನಿಗದಿ ಮಾಡಿದ್ದು ಅವುಗಳನ್ನೂ ನಿರ್ವಹಣೆ ಮಾಡಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.