ADVERTISEMENT

ಡೆಂಗಿ: ರಾಜ್ಯದಲ್ಲಿ 155 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 15:49 IST
Last Updated 5 ಜುಲೈ 2024, 15:49 IST
ಡೆಂಗಿ ಹರಡುವ ಈಡಿಸ್ ಸೊಳ್ಳೆ
ಡೆಂಗಿ ಹರಡುವ ಈಡಿಸ್ ಸೊಳ್ಳೆ   

ಬೆಂಗಳೂರು: ಡೆಂಗಿ ಪತ್ತೆ ಸಂಬಂಧ ಶುಕ್ರವಾರ 899 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ 107 ಸೇರಿ ರಾಜ್ಯದಲ್ಲಿ 155 ಮಂದಿಗೆ ಡೆಂಗಿ ದೃಢಪಟ್ಟಿದೆ. 

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಈ ಪ್ರಕರಣಗಳಲ್ಲಿ ನಾಲ್ಕು ಮಂದಿ ಒಂದು ವರ್ಷದೊಳಗಿನವರಾದರೆ, 44 ಮಂದಿ ಒಂದರಿಂದ 18 ವರ್ಷದೊಳಗಿನರಾಗಿದ್ದಾರೆ. 107 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ. ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 343 ಡೆಂಗಿ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗುರುವಾರ 1,502 ಪರೀಕ್ಷೆ  ನಡೆಸಲಾಗಿತ್ತು. ಇದರಿಂದಾಗಿ 286 ಪ್ರಕರಣಗಳು ಖಚಿತಪಟ್ಟಿದ್ದವು. ಶುಕ್ರವಾರ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 

ADVERTISEMENT

ಬೆಂಗಳೂರಿನಲ್ಲಿ ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 1,793ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು (521), ಮೈಸೂರು (496) ಹಾಗೂ ಹಾವೇರಿ (481) ಜಿಲ್ಲೆಯಲ್ಲಿ ಅಧಿಕ ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ರಾಜ್ಯದಲ್ಲಿ ಡೆಂಗಿ ಪೀಡಿತರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.