ADVERTISEMENT

ಸಿಇಟಿ ಪ್ರವೇಶ ಪ್ರಕ್ರಿಯೆ: ಭರ್ತಿಯಾಗದೆ ಉಳಿದ 16 ಸಾವಿರ ಸೀಟು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 15:32 IST
Last Updated 22 ಅಕ್ಟೋಬರ್ 2024, 15:32 IST
   

ಬೆಂಗಳೂರು: ಸಿಇಟಿ ಎರಡನೇ ಮುಂದುವರಿದ ಸುತ್ತಿನ ಪ್ರವೇಶ ಪ್ರಕ್ರಿಯೆ ನಂತರ ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ಕೋರ್ಸ್‌ಗಳ 16,004 ಸೀಟುಗಳು ಭರ್ತಿಯಾಗದೆ ಉಳಿದಿವೆ.

ಸರ್ಕಾರ ಹಾಗೂ ಅನುದಾನರಹಿತ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದ ನಡುವಿನ ಒಪ್ಪಂದದ ಪ್ರಕಾರ ಪ್ರವೇಶ ಪ್ರಕ್ರಿಯೆ ನಂತರ ಬಾಕಿ ಉಳಿದ ಸೀಟುಗಳನ್ನು ಕಾಲೇಜುಗಳಿಗೆ ಬಿಟ್ಟು ಕೊಡಬೇಕಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಎಂಜಿನಿಯರಿಂಗ್‌ನ ವಿವಿಧ ವಿಭಾಗಗಳಲ್ಲಿ 13,089, ಆರ್ಕಿಟೆಕ್ಚರ್‌ ಕೋರ್ಸ್‌ನಲ್ಲಿ 569 ಸೀಟು ಭರ್ತಿಯಾಗಿಲ್ಲ. ಸೀಟು ಹಂಚಿಕೆಯಾದ 2,208 ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲ. ಶುಲ್ಕ ಪಾವತಿಸಿದ 95 ವಿದ್ಯಾರ್ಥಿಗಳು ಕಾಲೇಜುಗಳಿಗೆ ಪ್ರವೇಶ ಪಡೆದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.