ADVERTISEMENT

371ಜೆ ಅಡಿ ಮೀಸಲಾತಿ: ಮಾರ್ಗಸೂಚಿ ಸಿದ್ಧಪಡಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:41 IST
Last Updated 3 ಜುಲೈ 2024, 15:41 IST
<div class="paragraphs"><p>ಪ್ರಿಯಾಂಕ್‌ ಖರ್ಗೆ</p></div>

ಪ್ರಿಯಾಂಕ್‌ ಖರ್ಗೆ

   

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371ಜೆ ಅಡಿ ಹುದ್ದೆಗಳಿಗೆ ನೇಮಕಾತಿ ಹಾಗೂ ಬಡ್ತಿ ಮೀಸಲಾತಿ ನೀಡುವ ಸಂದರ್ಭದಲ್ಲಿ ಉಂಟಾಗುವ ಗೊಂದಲಗಳನ್ನು ನಿವಾರಿಸಲು ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ಡಿಪಿಎಆರ್, ಕೆಪಿಎಸ್‌ಸಿ ಮತ್ತು ಕೆಇಎ ಅಧಿಕಾರಿಗಳಿಗೆ 371 ಜೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಸಮಿತಿಯ ಸಭೆ ಬುಧವಾರ ನಡೆಯಿತು. ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ಸಂದರ್ಭದಲ್ಲಿ ಪದೇ ಪದೇ ಗೊಂದಲಗಳು ಉಂಟಾಗುತ್ತಿವೆ. ಅದನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿ ಸಿದ್ಧಪಡಿಸಿ ಸಮಿತಿಯ ಮುಂದಿನ ಸಭೆಗೆ ಮಂಡಿಸುವಂತೆ ಅವರು ತಿಳಿಸಿದರು.

ADVERTISEMENT

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ, ಡಿಪಿಎಆರ್‌ ಕಾರ್ಯದರ್ಶಿ ಡಿ. ರಂದೀಪ್, ಕೆಪಿಎಸ್‌ಸಿ ಕಾರ್ಯದರ್ಶಿ ಕೆ. ರಾಕೇಶ್‌ ಕುಮಾರ್‌, ಕೆಇಎ ಮತ್ತು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.