ಬೆಂಗಳೂರು: ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
‘ಪ್ರತಿ ತಿಂಗಳ ಮೂರನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಈ ಕುಂದುಕೊರತೆ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ. ನೌಕರರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳ ಕುರಿತು ಚರ್ಚಿಸಬಹುದು’ ಎಂದು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.