ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಪಂಕಜ್ ಪಾಂಡೆ ಅವರನ್ನು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಎನ್. ಮಂಜುಳಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕೃಷಿ ಇಲಾಖೆಯ ಆಯುಕ್ತ ಶರತ್ ಬಿ. ಅವರನ್ನು ಕರ್ನಾಟಕ ಗ್ರಾಮೀಣ ನೀರು ಮತ್ತು ಪೂರೈಕೆ ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.