ADVERTISEMENT

ಅಂಜನಾದ್ರಿ ಬೆಟ್ಟ: ಮುಜರಾಯಿ ಇಲಾಖೆಯಿಂದ ಭಕ್ತಾದಿಗಳ ಸೌಕರ್ಯಕ್ಕೆ ₹40ಲಕ್ಷ ಅನುದಾನ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2023, 16:16 IST
Last Updated 16 ಡಿಸೆಂಬರ್ 2023, 16:16 IST
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟ
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟ   

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆಯುವ ಹನುಮ ಮಾಲಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಮುಜರಾಯಿ ಇಲಾಖೆ ₹ 40 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ಭಕ್ತಾದಿಗಳಿಗೆ ಊಟ, ವಸತಿ, ಕುಡಿಯುವ ನೀರು, ಶೌಚಾಲಯ ಮತ್ತಿತರ ಸೌಲಭ್ಯ ಕಲ್ಪಿಸಲು ಅಂಜನಾದ್ರಿಯ ಆಂಜನೇಯಸ್ವಾಮಿ ದೇವಸ್ಥಾನದ ನಿಧಿಯಿಂದ ₹ 51 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಪ್ರಸ್ತಾವ ಸಲ್ಲಿಸಿದ್ದರು.

ಈ ಉದ್ದೇಶಗಳಿಗಾಗಿ ದೇವಸ್ಥಾನದ ನಿಧಿಯಿಂದ ₹ 40 ಲಕ್ಷ ಬಿಡುಗಡೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಮೊತ್ತ ಅಗತ್ಯವಿದ್ದರೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.