ADVERTISEMENT

ಪಂಚ ರಾಜ್ಯ ಫಲಿತಾಂಶ: ಲೋಕಸಭಾ ಚುನಾವಣೆಗೆ ದಿಕ್ಸೂಚಿ- ಸಿಎಂ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 10:10 IST
Last Updated 11 ಡಿಸೆಂಬರ್ 2018, 10:10 IST
   

ಬೆಳಗಾವಿ:ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿರುವುದರ ದ್ಯೋತಕವಾಗಿದೆ. ದೇಶದಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ವಿರೋಧ ಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಮುಖಭಂಗವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಐದೂ ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜೊತೆಯಾಗಿ ಚುನಾವಣೆ ಎದುರಿಸುವ ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುವೆ ಎಂದ ಸಿಎಂ, ಸಮಾನ ಮನಸ್ಕ ರಾಜಕೀಯ ನಾಯಕರನ್ನು ಒಂದೆಡೆಗೆ ತರಲು ರಾಹುಲ್‌ ಗಾಂಧಿ ಹಾಗೂ ಜಾತ್ಯತೀತ ಪಕ್ಷಗಳ ನಾಯಕರು ಮುಂದಾಗಬೇಕು ಎಂದು ಆಶಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.