ADVERTISEMENT

ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಕರ್ನಾಟಕದ ಯಾತ್ರಿಗಳಿಗೆ ₹5,000 ಸಹಾಯಧನ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 0:00 IST
Last Updated 14 ನವೆಂಬರ್ 2024, 0:00 IST
ವೈಷ್ಣೋದೇವಿ ಗುಹಾ ದೇಗುಲ
ವೈಷ್ಣೋದೇವಿ ಗುಹಾ ದೇಗುಲ   

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿರುವ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಕರ್ನಾಟಕದ ಯಾತ್ರಿಗಳಿಗೆ ತಲಾ ₹ 5,000 ಸಹಾಯಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ತು ನಿರ್ಧರಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

120 ವರ್ಷ ಹಳೆಯದಾಗಿರುವ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಜೀರ್ಣೋದ್ಧಾರಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು, ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಯಿತು. 

ADVERTISEMENT

ಅರ್ಚಕರ ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೂ ಕಾಲಾವಕಾಶ ನೀಡಲು ಸಭೆ ನಿರ್ಣಯ ಕೈಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.