ADVERTISEMENT

ಕಲ್ಯಾಣ ಕರ್ನಾಟಕದ 5,267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2024, 15:18 IST
Last Updated 12 ಅಕ್ಟೋಬರ್ 2024, 15:18 IST
   

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ  5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿ, ಆದೇಶ ಹೊರಡಿಸಿದೆ.

ಒಂದರಿಂದ ಐದನೇ ತರಗತಿಗೆ (ಪ್ರಾಥಮಿಕ ಶಾಲಾ ಶಿಕ್ಷಕರು) 4,424 ಶಿಕ್ಷಕರು, ಅರರಿಂದ ಎಂಟನೇ ತರಗತಿಗೆ (ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು) 78 ಹಾಗೂ 380 ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್-2) ಸೇರಿದಂತೆ ಒಟ್ಟು 5,267 ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ. 

ಹುದ್ದೆಗಳ ನೇಮಕಾತಿಗೆ ಪೂರ್ವ ಪ್ರಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಹುದ್ದೆಗಳಿಗೆ ತಗುಲಬಹುದಾದ ಹಣಕಾಸು ವಿವರಗಳನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದೆ. 

ADVERTISEMENT

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ  ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಸದ್ಯ 6,584 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಶೇ 80ರಷ್ಟನ್ನು ಭರ್ತಿ ಮಾಡಲಾಗುತ್ತಿದೆ.

2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.