ಬೆಂಗಳೂರು: ‘ರಾಜ್ಯದಲ್ಲಿ ಆರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಜಿಸುವ ಜತೆಗೆ ‘ಪ್ರಿನ್ಸಿಪಲ್ ಡೆಪ್ಯುಟಿ ಚೀಫ್ ಮಿನಿಸ್ಟರ್’ ಹುದ್ದೆಯನ್ನು ಸೃಜಿಸಿ ಇತಿಹಾಸ ಸೃಷ್ಟಿಸಬೇಕು’ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
‘ಬಿಜೆಪಿ ಸರ್ಕಾರದಲ್ಲಿ ಮೂವರು ಡಿಸಿಎಂಗಳಿದ್ದರು. ಆಂಧ್ರ ಪ್ರದೇಶದಲ್ಲಿ ಐವರು ಡಿಸಿಎಂಗಳಿದ್ದಾರೆ. ಆದ್ದರಿಂದ ಇಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಆರು ಹುದ್ದೆಗಳನ್ನು ಸೃಷ್ಟಿಸಲಿ’ ಎಂದು ಆಗ್ರಹಿಸಿದರು.
‘ರಾಜ್ಯದ ಪ್ರತಿಯೊಂದು ವಲಯ ಸೇರಿದಂತೆ ಪ್ರಬಲ ಸಮುದಾಯಕ್ಕೆ ಹುದ್ದೆ ಕೊಟ್ಟಂತಾಗುತ್ತದೆ. ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿಸುವುದರಿಂದ ಲೋಕಸಭೆ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗಳಿಸಿಬಹುದು ಎಂದು ಹೇಳಲಾಗುತ್ತಿದೆ. ಆದ್ದರಿಂದ ಮೂರೇಕೆ ಆರು ಡಿಸಿಎಂಗಳನ್ನೇ ನೇಮಿಸಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.